ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಆ.15 ರೊಳಗೆ ಇ-ಕೆವೈಸಿ ಕಡ್ಡಾಯ
ಮಂಗಳೂರು, ಆ.11, 2022: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು.
ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.