ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

 ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
Share this post

ಕಾರವಾರ ಆ. 16, 2022: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಜಿದಾರರು ವೆಬ್‍ಸೈಟ್ kacdc.karnataka.gov.in ನಲ್ಲಿ ಸೆ. 11ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಯು ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಆಧಾರ್‍ಗೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಆಧಾರ್‍ಗೆ ಬ್ಯಾಂಕ್ ಖಾತೆಯು ಜೋಡಣೆಯಾಗಿರಬೇಕು. ಮಹಿಳೆಯರಿಗೆ ಶೇ.33% ಹಾಗೂ ವಿಕಲಚೇತನರಿಗೆ ಶೇ.5%ರಷ್ಟು ಮೀಸಲಾತಿ ಇರುತ್ತದೆ.

ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 94484 51111ಗೆ ಬೆಳಿಗ್ಗೆ:10.00 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!