ಉಡುಪಿ ಜಿಲ್ಲೆಯ ರಜತ ಮಹೋತ್ಸವ ಪೂರ್ವ ತಯಾರಿ: ಸಂಘ ಸಂಸ್ಥೆಗಳ ಜೊತೆ ಶಾಸಕ ರಘುಪತಿ ಭಟ್ ಸಭೆ

 ಉಡುಪಿ ಜಿಲ್ಲೆಯ ರಜತ ಮಹೋತ್ಸವ ಪೂರ್ವ ತಯಾರಿ: ಸಂಘ ಸಂಸ್ಥೆಗಳ ಜೊತೆ ಶಾಸಕ ರಘುಪತಿ ಭಟ್ ಸಭೆ
Share this post

ಉಡುಪಿ, ಆಗಸ್ಟ್ 20, 2022: ಉಡುಪಿ ಜಿಲ್ಲೆ ರಚನೆಯಾಗಿ ಈ ಅಗಸ್ಟ್ 25 ಕ್ಕೆ 25 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭ ಅಗಸ್ಟ್ 25 ರಿಂದ ಜನವರಿ 25 ರ ವರೆಗೆ ನಡೆಯಲಿದೆ. ಇದರ ಪೂರ್ವ ತಯಾರಿ ಕುರಿತು ಇಂದು ದಿನಾಂಕ 22-08-2022 ರಂದು ಜಿಲ್ಲಾ ಪಂಚಾಯತ್ ಡಾll ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸರ್ವ ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಯಿತು.

ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆ ವಹಿಸಿ ರಜತ ಮಹೋತ್ಸವ ಆಚರಣೆಗೆ ಸಂಘ ಸಂಸ್ಥೆಯವರ ಸಲಹೆ, ಸಹಕಾರ, ಸಹಭಾಗಿತ್ವ ನೀಡುವಂತೆ ತಿಳಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಅಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಸಹಾಯಕ ಆಯುಕ್ತರಾದ ರಾಜು ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಟಿ ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!