ಆ 27 ರಂದು ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

 ಆ 27 ರಂದು ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
Share this post

ಮಂಗಳೂರು,ಆ.26, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ತಾಲೂಕು ಪಂಚಾಯತ್ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಲೇಡಿಹಿಲ್‍ನಲ್ಲಿರುವ ಮಂಗಳಾ ಕ್ರೀಡಾಂಗಣದಲ್ಲಿ ಆ.27ರ ಶನಿವಾರ ಬೆಳಿಗ್ಗೆ 9ಕ್ಕೆ 2022-23ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ.

ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಕ್ರೀಡಾ ಕೂಟದ ಧ್ವಜರೋಹಣ ನೆರವೇರಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅಥಿತಿಗಳಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭೆಯ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ವೈ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಮೀನುಗಾರಿಕೆ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳ ರಾವ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಜಗದೀಶ್ ಪೈ, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮಹಾನಗರ ಪಾಲಿಕೆ ಸದಸ್ಯರಾದ ಸಂಧ್ಯಾ ಎಂ.ಆಚಾರ್ ಉಪಸ್ಥಿತಿ ವಹಿಸುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!