ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನೆ

 ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನೆ
Share this post

ಉಡುಪಿ, ಆಗಸ್ಟ್ 29, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಗ್ನಿಪಥ್‌ಗೆ ಪೂರಕವಾದ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉಡುಪಿ ಇದರ ಉದ್ಘಾಟನಾ ಸಮಾರಂಭ ಹಾಗೂ ಅರ್ಹತಾ ಪತ್ರ ವಿತರಣೆ ಕಾರ್ಯಕ್ರಮವು ಸೆಪ್ಟಂಬರ್ 5 ರಂದು ಮಧ್ಯಾಹ್ನ 2.30 ಕ್ಕೆ ಉಡುಪಿ ಕಿದಿಯೂರು ಹೋಟೆಲ್‌ನ ಶೇಷಶಯನ ಹಾಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಭಾರತ ಕೌಶಲ್ಯಾ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ರಾಜ್ಯ ಸಚಿವ ರಾಜೀವ ಚಂದ್ರಶೇಖರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅರ್ಹತಾ  ಪತ್ರ ವಿತರಣೆ ಮಾಡಲಿದ್ದು, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!