ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

 ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ
Share this post

ಉಡುಪಿ, ಸೆ 03, 2022: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಬ್ಯಾಟರಿ ಚಾಲಿತ/ ಇತರೆ ದ್ವಿಚಕ್ರ ವಾಹನ ಯೋಜನೆ, ಪೌರಕಾರ್ಮಿಕ/ ಸಪಾಯಿ ಕರ್ಮಚಾರಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣಾ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂರ‍್ಸ್ ಹಾಗೂ ಅವರ ಅವಲಂಬಿತರಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ  ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!