ಪುನೀತ್ ಉಪಗ್ರಹ ಉಡಾವಣೆ ನೋಡುವ ಅವಕಾಶ
ಕಾರವಾರ ಸೆ. 03, 2022: 75 ನೇ ಸ್ವಾತಂತ್ರೋತ್ಸವದ ಸುಸಂದರ್ಭದಲ್ಲಿ, ದೇಶಾದ್ಯಂತ ವಿದ್ಯಾರ್ಥಿಗಳು ತಯಾರಿಸಿರುವ 75 ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದ್ದು, ಕರ್ನಾಟಕದಲ್ಲಿ ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಗ್ರಹ-ಕೆಜಿಎಸ್ 3 ಸ್ಯಾಟ್ ಯೋಜನೆಯಲ್ಲಿ ನಿರ್ಮಾಣಗೊಳ್ಳುವ ಉಪಗ್ರಹವನ್ನು ಪುನೀತ್ ಉಪಗ್ರಹ ಎಂದು ನಾಮಕರಣ ಮಾಡಲಾಗಿದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ – ಕಾಂಗ್ರೆಸ್ ಅಸೋಸಿಯೇಷನ್ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.
ಪುನೀತ್ ಉಪಗ್ರಹ ಉಡಾವಣೆಯ ವಿದ್ಯಾರ್ಥಿ ಕೇಂದ್ರಿತ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಶ್ರೀಹರಿಕೋಟಾದಲ್ಲಿ ಉಪಗ್ರಹ ಉಡಾವಣೆಯನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.
ಈ ಅವಕಾಶವನ್ನು ಪಡೆಯಲು ಹೆಸರು ನೊಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೊಂದಾವಣೆ ಹೇಗೆ
8 ರಿಂದ 10 ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗಹಿಸಲು https://forms.gle/GaSmj3ieeggWYRKH6 ನಲ್ಲಿ ನೊಂದಾಯಿಸಿಕೊಳ್ಳಬೇಕು.
11 ಮತ್ತು 132 ನೇ ತರಗತಿಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ, ಖಗೋಳಶಾಸ್ತ್ರದ ಕುರಿತು ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು https://forms.gle/x4zWiqVXofZ9qbd97 ನಲ್ಲಿ ನೊಂದಾಯಿಸಿಕೊಳ್ಳಬಹುದು.
ನೊಂದಾವಣೆಗೆ ಸೆ. 10 ಕೊನೆಯ ದಿನ.
Latest Post
- Udupi Sri Krishna Alankara
- Udupi Mallige and Jaaji today’s price
- Today’s Rubber price at Rubber Society- Ujire
- Kateel Sri Durgaparameshwari today’s Alankara
- Daily Panchangam