ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ
ಉಡುಪಿ, ಸೆ 08, 2022: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾ ಸರಕಾರಿ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರವು ಸೆಪ್ಟಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ನಗರದ ಬ್ರಹ್ಮಗಿರಿಯ ಐ.ಎಮ್.ಎ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಎಂ, ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ, ಐ.ಎಂ.ಎ ಅಧ್ಯಕ್ಷ ಡಾ. ವಿನಾಯಕ ಶೆಣೈ, ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ ಹೆಚ್, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.