ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ


ಮಂಗಳೂರು, ಸೆ.13, 2022: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿ ನಿಲಯಗಳು ಮಾತ್ರ) ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ., ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://shp.karnataka.gov.in ಮೂಲಕ ಮುಂಬರುವ ಸೆಪ್ಟೆಂಬರ್ 22ರೊಳಗೆ ಅರ್ಜಿ ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಗಳಿಗೆ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವೆಬ್‍ಸೈಟ್ ಮೂಲಕ bcwd.hostels@karnataka.gov.in ಇ-ಮೇಲ್ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ:080-8050370006 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.