ಉಡುಪಿ: ಸೆ. 17 ರಂದು ವಿಶ್ವಕರ್ಮ ಜಯಂತಿ

 ಉಡುಪಿ: ಸೆ. 17 ರಂದು ವಿಶ್ವಕರ್ಮ ಜಯಂತಿ
Share this post

ಉಡುಪಿ, ಸೆ. 14, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯು ಸೆಪ್ಟಂಬರ್ 17 ರಂದು ಬೆಳಗ್ಗೆ 10.30 ಕ್ಕೆ ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ರತ್ನಾಕರ ಆಚಾರ್ಯ ಉದ್ಯಾವರ, ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಕುತ್ಯಾರು ಆನೆಗುಂದಿ ಮಠದ ಮೌನೇಶ್ ಶರ್ಮ ಉಪನ್ಯಾಸ ನೀಡಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!