ಅಂಕೋಲಾ: ಸೆ.17 ರಂದು ವಿದ್ಯುತ್ ಅದಾಲತ್
ಕಾರವಾರ ಸೆ. 16, 2022: ಕರ್ನಾಟಕ ಸರಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಅಂಕೋಲಾ ಉಪವಿಭಾಗದ ಬಾವಿಕೇರಿ ಮತ್ತು ಹೊನ್ನಬೈಲ್ ಗ್ರಾಮ ಪಂಚಾಯತಿಯಲ್ಲಿ ಸೆ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ವಿದ್ಯುತ್ ಅದಾಲತ್ನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ನೀಡಬೇಕು ಎಂದು ಅಂಕೊಲಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.