ಉಡುಪಿ: ಸೆ.18 ರಂದು ಬೀಚ್ ಸ್ವಚ್ಛತಾ ಕಾರ್ಯಕ್ರಮ

Beach Cleaning
ಉಡುಪಿ, ಸೆ 16, 2022: ಕರಾವಳಿ ಕಾವಲು ಪೊಲೀಸ್ ಇವರ ವತಿಯಿಂದ ಸೆಪ್ಟಂಬರ್ 18 ರಂದು ಬೆಳಗ್ಗೆ 6.30 ರಿಂದ 8.30 ರ ವರೆಗೆ ಮಲ್ಪೆ ಪಡುಕೆರೆ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂತೆಕಟ್ಟೆ ಧನ್ವಂತರಿ ನರ್ಸಿಂಗ್ ಕಾಲೇಜು, ಮಣಿಪಾಲ ಮುನಿಯಾಲು ಆಯುರ್ವೇದ ಕಾಲೇಜು ಇದರ ಎನ್.ಎಸ್.ಎಸ್ ಘಟಕ ಮತ್ತು ಉಡುಪಿ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ & ಟೂರಿಸಂ ಸೈನ್ಸ್ ಕಾಲೇಜುಗಳ ವಿದ್ಯಾರ್ಥಿಗಳು, ಕರಾವಳಿ ಕಾವಲು ಪೊಲೀಸ್ ಮಂಗಳೂರು, ಹೆಜಮಾಡಿ, ಮಲ್ಪೆ, ಗಂಗೊಳ್ಳಿ ಮತ್ತು ಭಟ್ಕಳ ಠಾಣೆಗಳ ಪೊಲೀಸ್ ಸಿಬ್ಬಂದಿಗಳು ಹಾಗೂ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಾಜ್ಯ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ