ಸೆ.17 ರಿಂದ ಎಂಡೋಸಲ್ಫಾನ್ ಆರೋಗ್ಯ ತಪಾಸಣಾ ಶಿಬಿರ

 ಸೆ.17 ರಿಂದ ಎಂಡೋಸಲ್ಫಾನ್ ಆರೋಗ್ಯ ತಪಾಸಣಾ ಶಿಬಿರ
Share this post

ಮಂಗಳೂರು,ಸೆ.16, 2022: ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ಸೆ.17ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಸೆ.17ರ ಸೋಮವಾರ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ, 20ರ ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಸೆ.21ರ ಬುಧವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.

ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!