ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ
ಮಂಗಳೂರು,ಸೆ.17, 2022: .ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಅಕ್ಟೋಬರ್ 20ರೊಳಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ https://www.dbcdc.karnataka.gov.in ವೆಬ್ಸೈಟ್ ಅಥವಾ ನಿಗಮದ ದೂ.ಸಂ:080-22374832, 9606066389 ಹಾಗೂ 8824300400 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.