ಸೆ. 20: ಬಂಟ್ವಾಳ ತಾಲೂಕಿನಲ್ಲಿ ಜಿಲ್ಲಾಧಿಕಾರಿಯಿಂದ ಕುಂದು ಕೊರತೆ ಆಲಿಕೆ
ಮಂಗಳೂರು,ಸೆ.19, 2022: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೆ.20ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲಭ್ಯವಿದ್ದು, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸಲಿದ್ದಾರೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಜಿಲ್ಲಾಧಿಕಾರಿಯವರು ತಾಲೂಕು ಕಚೇರಿಯಲ್ಲಿ ಲಭ್ಯವಿದ್ದು, ಜನಸಾಮಾನ್ಯರ ಕುಂದುಕೊರತೆಗಳನ್ನು ಬಗೆಹರಿಸಲು ತ್ವರಿತ ಕ್ರಮ ಕೈಗೊಳ್ಳುತ್ತಿದ್ದಾರೆ.