ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅವಧಿ ವಿಸ್ತರಣೆ

 ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅವಧಿ ವಿಸ್ತರಣೆ
Share this post

ಉಡುಪಿ, ಸೆ 19, 2022: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮತ್ತು ಆರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಗ್ರಾಮಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾತ್ರ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!