ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

 ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
Share this post

ಉಡುಪಿ, ಸೆ 19, 2022: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಸೆಪ್ಟಂಬರ್ 21 ರಂದು ಬೈಂದೂರು ಪ್ರವಾಸಿ ಮಂದಿರ, ಸೆ. 22 ರಂದು ಕುಂದಾಪುರ ಪ್ರವಾಸಿ ಮಂದಿರ, ಸೆ. 23 ರಂದು ಹೆಬ್ರಿ ಪ್ರವಾಸಿ ಮಂದಿರ, ಸೆ. 26 ರಂದು ಕಾರ್ಕಳ ಪ್ರವಾಸಿ ಮಂದಿರ, ಸೆ. 27 ರಂದು ಬ್ರಹ್ಮಾವರ ತಾಲೂಕು ಕಚೇರಿ ಆವರಣ ಹಾಗೂ ಸೆ. 28 ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!