ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ: ಅವಧಿ ವಿಸ್ತರಣೆ

 ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ: ಅವಧಿ ವಿಸ್ತರಣೆ
Share this post

ಉಡುಪಿ, ಸೆ 21, 2022: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3 ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 22 ರ ವರೆಗೆ ವಿಸ್ತರಿಸಲಾಗಿದೆ.

 ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂಖ್ಯೆ: 080-22374832, 9606066389 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!