ಕಟೀಲು: ನವರಾತ್ರಿ ಹಿನ್ನಲೆಯಲ್ಲಿ ಸೆ.26 ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು
ಮಂಗಳೂರು, ಸೆ.21, 2022: ನವರಾತ್ರಿ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳು 1989ರ ನಿಯಮ 217ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಪೊಲೀಸ್ ಆಯುಕ್ತರೂ, ಅಪರ ದಂಡಾಧಿಕಾರಿಗಳಾದ ಎನ್. ಶಶಿಕುಮಾರ್ ಸೆ.26ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 05ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಆದೇಶಿಸಿದ್ದಾರೆ.
ಬದಲಿ ವ್ಯವಸ್ಥೆ ವಿವರ:
ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು. ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು. ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.
ರಥಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Latest Post
- Today’s Rubber price at Rubber Society- Ujire
- Kateel Sri Durgaparameshwari today’s Alankara
- Daily Panchangam
- Sri Dharmasthala Mela Yakshagana show today
- Kateel Mela Yakshagana details