ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್

 ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್
Share this post

ಉಡುಪಿ, ಸೆ 27, 2022: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿತರಣೆ ಮಾಡಲಾಗುತ್ತಿದೆ.

ಕರ್ನಾಟಕ ರಾಜ್ಯ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಚಿಸುವ ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ 07 ಹಂತಗಳವರೆಗೆ(ಗರಿಷ್ಟ 45 ಕಿ.ಮೀ) ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ.

ಇಡಿಸಿಎಸ್ ಇಲಾಖೆಯ/ಸೇವಾಸಿಂಧು ಪೋರ್ಟಲ್ ರವರು ರಾಜ್ಯಾದ್ಯಂತ ಕರ್ನಾಟಕ ಒನ್/ಗ್ರಾಮ ಸೇವಾ ಒನ್ ಸೆಂಟರ್‌ಗಳ ಮೂಲಕ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರುಗಳಿಗೆ ಉಚಿತ ಬಸ್ಸುಪಾಸು ವಿತರಿಸಲಾಗುತ್ತಿದೆ. ಸದರಿ ಪಾಸುದಾರರು ಕರಾರಸಾ ನಿಗಮ/ವಾಕರಸಾ ಸಂಸ್ಥೆ/ಕಕರಸಾ ನಿಗಮಗಳ ನಗರ, ಸಾಮಾನ್ಯ/ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಲು ಅವಕಾಶವಿರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!