ಪಣಂಬೂರು ಕಡಲ ಕಿನಾರೆಯ ಅಲೆ ಅಲೆಯಲ್ಲಿ ಕನ್ನಡದ ಕಂಪು ಬೀರಿದ ಕೋಟಿ ಕಂಠ ಗಾಯನ

 ಪಣಂಬೂರು ಕಡಲ ಕಿನಾರೆಯ ಅಲೆ ಅಲೆಯಲ್ಲಿ ಕನ್ನಡದ ಕಂಪು ಬೀರಿದ ಕೋಟಿ ಕಂಠ ಗಾಯನ
Share this post

ಮಂಗಳೂರು,ಅ.28, 2022: 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಪಣಂಬೂರು ಕಡಲ ಕಿನಾರೆಯಲ್ಲಿ ಅ.28ರ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರ ನೇತೃತ್ವದಲ್ಲಿ ಗೀತ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಅಂಬೆಕಲ್ಲು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ, ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ವಿವಿಧ ಇಲಾಖೆಗಳ ಅಧಿಕಾರಿಗಳು, ಹಲವಾರು ಶಾಲಾ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು.

ಕವಿ ಕುವೆಂಪು ಅವರ ನಾಡಗೀತೆ ಮೂಲಕ ಕೋಟಿ ಕಂಠ ಗಾಯನವನ್ನು ಪ್ರಾರಂಭಿಸಲಾಯಿತು. ನಂತರ ಕ್ರಮವಾಗಿ ಹುಯಿಲಗೊಳ ನಾರಾಯಣ್ ರಾವ್ ಅವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ರಚನೆಯ ಬಾರಿಸು ಕನ್ನಡ ಡಿಂಡಿಮವ, ಡಿ.ಎಸ್ ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚೆನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಕೊನೆಯಲ್ಲಿ ಹಂಸಲೇಖ ರಚನೆಯ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಹಾಡುವ ಮೂಲಕ ಕೋಟಿ ಕಂಠ ಗಾಯನವನ್ನು ಯಶಸ್ವಿಗೊಳಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ವಂದಿಸಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!