ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
ಕಾರವಾರ, ಅ 28, 2022: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ ಜಾತಿ, ಪ. ವರ್ಗ ಮತ್ತು ಇತರೆ ಜನಾಂಗದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ www.bcwd.karnataka.gov.in ಮೂಲಕ ನ.10 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08382 – 226588, 226589 ಗೆ ಸಂಪರ್ಕಿಸಿ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ