ಜನರಲ್ ಕೆ.ಎಸ್.ತಿಮ್ಮಯ್ಯ ಪ್ರಶಸ್ತಿ: ಅರ್ಜಿ ಆಹ್ವಾನ

 ಜನರಲ್ ಕೆ.ಎಸ್.ತಿಮ್ಮಯ್ಯ ಪ್ರಶಸ್ತಿ: ಅರ್ಜಿ ಆಹ್ವಾನ
Share this post

ಕಾರವಾರ, ಅ, 31, 2022: 2021-22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ (10 ನೇ ತರಗತಿ) ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷೆಗಳಲ್ಲಿ ಗರಿಷ್ಟ ಪ್ರತಿಶತ 85% ಅಂಕಗಳನ್ನು ಮೀರಿ ಪಡೆದ ಕರ್ನಾಟಕದ ಮೂಲ ನಿವಾಸಿ, ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಅರ್ಹ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಾರವಾರ ಇವರಿಂದ ಪಡೆದು ಭರ್ತಿ ಮಾಡಿ ನವೆಂಬರ್ 11 ರೊಳಗೆ ಸಲ್ಲಿಸಲು ಸೂಚಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ದೂರವಾಣಿ ಸಂಖ್ಯೆ: 08382-226538 ಗೆ ಸಂಪರ್ಕಿಸಿ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!