ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

 ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
Share this post

ಉಡುಪಿ, ನ 03, 2022: ಬೆಳ್ತಂಗಡಿ ತಾಲೂಕು ಸುಬ್ರಹ್ಮಣ್ಯ ರಸ್ತೆ ರಾಜ್ಯ ಹೆದ್ದಾರಿ 17 ರ ಗುರುವಾಯನಕೆರೆ ಶಕ್ತಿನಗರ ದಿಂದ ಪಿಲ್ಯ ವರೆಗೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 366 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ನವೆಂಬರ್ 10 ರಂದು ಮಧ್ಯಾಹ್ನ 3 ಗಂಟೆಗೆ ಬಳಂಜ ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

 ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!