ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಅಹ್ವಾನ

 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಅಹ್ವಾನ
Share this post

ಕಾರವಾರ, ನ 15, 2022: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ (ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ) ಹಾಗೂ ಡಿ.ಎಡ್ (ಡಿ.ಎಸ್.ಇ.ಆರ್.ಟಿ ಯಿಂದ ಮಾನ್ಯತೆ ಪಡೆದಿರುವ) ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಆರ್ಥಿಕ ವರ್ಷದ ಅನುದಾನಕ್ಕೆ ಅನುಗುಣವಾಗಿ, ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ. 25000/-ಗಳ ವಿಶೇಷ ಪ್ರೋತ್ಸಾಹಧನ ಗರಿಷ್ಟ 2 ವರ್ಷ ನೀಡಲಾಗುವುದು.

ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಪ್ರತಿಶಿತ 50% ರಷ್ಟು ಅಂಕಗಳನ್ನು ಗಳಿಸಿರಬೇಕು. ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.

ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ https://sevasindhu.karnataka.gov.in/ ಅಥವಾ ಅಲ್ಪಸಂಖ್ಯಾತರ Twitter id:@MWDUKannada ನ ಮೂಲಕ ಡಿಸೆಂಬರ್ 10 ರೊಳಗೆ ಸಲ್ಲಿಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ ಅಥವಾ ದೂರವಾಣಿ ಸಂಖ್ಯೆ 08382-220336, 8277799990 ಗೆ ಸಂಪರ್ಕಿಸಿ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!