ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ದಿನ ನಿಗದಿ
ಮಂಗಳೂರು, ನ 15, 2022: ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 3 ರಿಂದ 5 ರ ವರೆಗೆ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.