ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಣವನ್ನು ಸರ್ಕಾರ ಬೇಧಿಸಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

 ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಣವನ್ನು ಸರ್ಕಾರ ಬೇಧಿಸಲಿದೆ: ಮುಖ್ಯಮಂತ್ರಿ ಬೊಮ್ಮಾಯಿ
Share this post

ಬಳ್ಳಾರಿ, ನ 20, 2022: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಣ ನಡೆದಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಳ್ಳಾರಿಯ ಜೀವೃತ್ತ ಮೈದಾನ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಇರುವಂತಹ ಸಲಕರಣೆಯ ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ್ಯ ವಿವರಗಳು ಲಭಿಸಿರುವುದರಿಂದ , ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬರುತ್ತದೆ ಎಂದರು.

ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿಯು ಆಸ್ಪತ್ರೆಯಲ್ಲಿದ್ದು, ನಂತರ ಆ ವ್ಯಕ್ತಿಯಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿಯು ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದ್ದು, ಇದು ಒಂದು ಭಯೋತ್ಪಾದಕ ಘಟನೆ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿರುವ ಬಗ್ಗೆ ಪೊಲೀಸರು ತಿಳಿಸದಿದ್ದಾರೆ. ಪಿಎಫ್ಐ ಗೂ, ಈ ಘಟನೆಗೂ ಸಂಬಂಧ ಇರುವ ಬಗ್ಗೆ ಮಾಹಿತಿಯೂ ತನಿಖೆಯ ನಂತರ ತಿಳಿಯಲಿದೆ ಎಂದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!