ಮಲವಂತಿಗೆ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

 ಮಲವಂತಿಗೆ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ
Share this post

ಮಂಗಳೂರು, ಡಿ.16, 2022: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಗ್ರಾಮ ವಾಸ್ತವ್ಯ ಮಾಡುವರು.

ಈ ಸಂದರ್ಭದಲ್ಲಿ ಅವರು ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಿರುತ್ತಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!