ಡಿ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

 ಡಿ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
Share this post

ಮಂಗಳೂರು,ಡಿ.16, 2022: ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಡಿ.17 ರಿಂದ 21 ರ ವರೆಗೆ ವಿವಿಧೆಡೆ ಹಮ್ಮಿಕೊಳ್ಳಲಾಗಿದೆ.

ಡಿ.17ರಂದು ಪುತ್ತೂರು ತಾಲೂಕಿನ ಪಾಣಾಜೆ, ಡಿ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಡಿ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!