ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

 ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
Share this post

ಉಡುಪಿ, ಡಿ 27, 2022: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಹಿರಿಯಡಕ ಘಟಕ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಆತ್ರಾಡಿ ವರೆಗೆ ರಸ್ತೆ ಕಾಮಗಾರಿಗೆ ಅಡಚಣೆಯಾಗುವ 997 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, 2023 ಜನವರಿ 7 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!