ಮಂಗಳೂರು: ಅರ್ಥಪೂರ್ಣವಾಗಿ ನಡೆದ ವಿಶ್ವಮಾನವ ದಿನಾಚರಣೆ
ಮಂಗಳೂರು, ಡಿ.29, 2022: ಕುವೆಂಪು ಅವರು ಕವಿಯಾಗಿ, ಕಾದಂಬರಿಕಾರರಾಗಿ ಸಾಹಿತ್ಯದ ವಿವಿಧ ಮಜಲುಗಳಲ್ಲಿ ಕೃಷಿ ಮಾಡಿ ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಡುವುದರೊಂದಿಗೆ ರಾಜ್ಯ, ದೇಶ ಹಾಗೂ ಇಡೀ ಪ್ರಪಂಚಕ್ಕೆ ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಬಣ್ಣಿಸಿದರು.
ಅವರು ಡಿ.29ರ ಗುರುವಾರ ನಗರದ ಬಲ್ಮಠದಲ್ಲಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶ್ವಮಾನದ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ವಿಶೇಷ ಉಪನ್ಯಾಸ ನೀಡಿದ ಲೇಖಕರಾದ ಟಿ.ಎ.ಎನ್. ಖಂಡಿಗೆ ಅವರು, ಕುವೆಂಪು ಅವರ ವಿಶ್ವಮಾನವ ಕಲ್ಪನೆ ಆದ್ಯಾತ್ಮಿಕವಾಗಿಯೂ ಹಾಗೂ ವೈಜ್ಞಾನಿಕವಾಗಿ ಅದ್ಬುತ ಕಲ್ಪನೆಯಾಗಿರುವ ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಕ್ಕೂ ಅನ್ವಯಿಸುತ್ತದೆ, ಮನುಷ್ಯ ಹುಟ್ಟುತ್ತಾ ವಿಶ್ವ ಮಾನವನಾಗಿದ್ದೂ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ವನಿತಾ ದೇವಾಡಿಗ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಸ್ವಾಗತಿಸಿದರು. ಉಮೇಶ್ ನಿರೂಪಿಸಿದರು.