ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

 ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ
Share this post

ಉಡುಪಿ, ಜ 01, 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಮತ್ತು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!