ಶಿರ್ವ: ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬ್ಯಾಂಕಿಂಗ್ ಉದ್ಯೋಗದ ಅರಿವು ಕಾರ್ಯಕ್ರಮ

 ಶಿರ್ವ: ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬ್ಯಾಂಕಿಂಗ್ ಉದ್ಯೋಗದ ಅರಿವು ಕಾರ್ಯಕ್ರಮ
Share this post

ಶಿರ್ವ, ಜ 06, 2023: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿಪುಲ ಉದ್ಯೋಗಾವಕಾಶಗಳಿದ್ದು ಅದನ್ನು ಪಡೆಯಲು ಯುವಕರಿಗೆ ಸರಿಯಾದ ಮಾಹಿತಿ ಮತ್ತು ಮಾರ್ಗದರ್ಶನದ ಅರಿವು ಇಂದು ಅತ್ಯಂತ ಅಗತ್ಯವಾಗಿದೆ ಎಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಬ್ಯಾಂಕಿಂಗ್ ಉದ್ಯೋಗದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿಯ ಪೃಥ್ವಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎಜುಕೇಶನ್ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಾಲಕೃಷ್ಣ ಸಾಮಗ ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ ವಿಎಚ್ ಇನ್ನಂಜೆ ಪಿಯು ಕಾಲೇಜಿನ ಪ್ರಾಂಶುಪಾಲ ಎಪಿ ಕೊಡಂಚ ಬ್ಯಾಂಕ್ ಕೋಚಿಂಗ್ ಮತ್ತೆ ಟ್ರೈನಿಂಗ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಪ್ರಾತ್ಯಕ್ಷಿತವಾಗಿ ಕಾರ್ಯಗಾರವನ್ನು ನೆರವೇರಿಸಿದರು.

ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಉದ್ಯೋಗಾವಕಾಶಗಳಿವೆ. ವಿದ್ಯಾರ್ಥಿ ದೆಸೆಯಲ್ಲೇ ಇದರ ಬಗ್ಗೆ ಸೂಕ್ತ ತಯಾರಿಕೆಯನ್ನು ನಡೆಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಡಾI ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಶ್ಮಿ ಶರ್ಮಿಳಾ ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು. ಅಂತಿಮ ವರ್ಷದ ಬಿಎ, ಬಿಕಾಂ,ಬಿಸಿಎ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

ವಿದ್ಯಾರ್ಥಿಗಳಾದ ಅನುಪ್ ನಾಯಕ್ ಮತ್ತು ಜಾನ್ಸಿ ಸಹಕರಿಸಿದ್ದರು.ರಿಯಾ ಸೇರಿನಾ ಡಿಸೋಜಾ ವಂದಿಸಿ, ಶೆಟ್ಟಿ ತರುಣ್ ರಮೇಶ್ ಸ್ವಾಗತಿಸಿದರು. ಲೋಬೋ ಆನ್ ರಿಯಾ ನೇವಿಲ್ ಕಾರ್ಯಕ್ರಮ ನಿರೂಪಿಸಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!