ಮಾಣಿಲ ಗ್ರಾಮದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ
ಮಂಗಳೂರು,ಜ.07, 2023:
ಜನವರಿ ತಿಂಗಳ ಮೂರನೇ ಶನಿವಾರ ಜ.21ರ ಬೆಳಿಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ.
ಆದಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಅಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.