ಜ. 17 ರಂದು ಉಡುಪಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ, ಜ 16, 2023: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 17 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್ಗಳಾದ ನಿಟ್ಟೆ ವಾಟರ್ ಸಪ್ಲೈ, 110 ಕೆ.ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್ಗಳಾದ ಮುಂಡ್ಕೂರು, ನಂದಳಿಕೆ, ಮತ್ತು ಬೆಳ್ಮಣ್ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿಫೀಡರ್ಗಳ ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಸ್ಥಾವರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ, 33/11 ಕೆ.ವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಹೆಬ್ರಿ, ಮುದ್ರಾಡಿ, ಮುನಿಯಾಲು, ಬಚ್ಚಾಪ್ಪು, ಕಬ್ಬಿನಾಲೆ, ಮುಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಬೇಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕೆರೆಬೆಟ್ಟು, ಕನ್ಯಾನ, ಚಾರ, ಹೊಸುರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೆöÊ, ಸೀತಾನದಿ, ಸೋಮೇಶ್ವರ, ನಾಡ್ಪಾಲು, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ವಿ.ಪಿನಗರ, ವಿ.ಆರ್.ನಗರ, ಕೆ.ಎಂ.ಸಿ, 33 ಕೆ.ವಿ ಮಾಹೆ ಫೀಡರಿನಲ್ಲಿ ಮತ್ತು 110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಹಿರೇಬೆಟ್ಟು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸಿಂಡಿಕೇಟ್ ಸರ್ಕಲ್, ಎಂ.ಜಿ.ಸಿ ಸ್ಕೂಲ್, ಬಿ.ಎಸ್.ಎನ್.ಎಲ್, ಟೆಲಿಫೋನ್ ಎಕ್ಸ್ ಚೇಂಜ್, ವಿದ್ಯಾರತ್ನ ನಗರ, ಡಿ.ಸಿ. ಆಫೀಸ್, ಆರ್.ಟಿ.ಓ ಆಫೀಸ್, ಪೆರಂಪಳ್ಳಿ, ಸಗ್ರಿ ನೋಳೆ, ಕೆ.ಎಂ.ಸಿ ಆಸ್ಪತ್ರೆ, ಎಂ.ಐ.ಟಿ, ಗುಡ್ಡೆಯಂಗಡಿ, ಕೊಂಡಾಡಿ, ಕೊಡಿಬೆಟ್ಟು, ಪೆರ್ಣಂಕಿಲ, ಕಣಂಜಾರು, ಕಾಜರಗುತ್ತು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಚಾಂತಾರು, ಚೇರ್ಕಾಡಿ ಹಾಗೂ 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ ಕಲ್ಯಾಣಪುರ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಾಗೂ 110/11ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಪ್ರಯುಕ್ತ ಹೆಚ್.ಟಿ/ಎಲ್.ಟಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬ್ರಹ್ಮಾವರ, ರಥಬೀದಿಪೇಟೆ, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ಜಿ.ಒ.ಎಸ್ ಅಳವಡಿಕೆ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಬಂಟಕಲ್ಲು, ಪೊಲಿಪು, ಮೂಡಬೆಟ್ಟು, ಪಾಂಗಳ, ಶಿರ್ವ ಹಾಗೂ ಶಂಕರಪುರ ಗ್ರಾಮ, ಕುರ್ಕಾಲು, ಇನ್ನಂಜೆ, ಕಳತ್ತೂರು (ಪುಂಚಲಕಾಡು), ಪಣಿಯೂರು, ಬಡಾ ಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಮಲ್ಲಾರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಿದ್ಕಲ್ಕಟ್ಟೆ ಮಾರ್ಗದಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಿದ್ಕಲ್ಕಟ್ಟೆ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಹಾಲಾಡಿ-28, ಹಳ್ಳಾಡಿ-ಹರ್ಕಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಶಂಕರನಾರಾಯಣ ಮತ್ತು ಯಡಾಡಿ ಮತ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.