ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ

 ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ
Share this post

ಮಂಗಳೂರು, ಜ.23, 2023: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ  ಪಂಚವೃತ್ತಿ ಅಭಿವೃದ್ಧಿಗಾಗಿ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಸುವಿಧಾ ತಂತ್ರಾಂಶದಲ್ಲಿ ವೆಬ್‍ಸೈಟ್ ವಿಳಾಸ: www.suvidha.karnataka.gov.in ಮೂಲಕ ಜ.30ರೊಳಗೆ  ಅರ್ಜಿ ಸಲ್ಲಿಸಬಹುದು. ಜ.31ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.  

ಹೆಚ್ಚಿನ ಮಾಹಿತಿಗೆ ನಗರದ ಉರ್ವಸ್ಟೋರ್ ನ ಮೂಡಾ ಕಟ್ಟಡದ 3ನೇ ಮಹಡಿಯಲ್ಲಿರುವ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ  ದೂ.ಸಂಖ್ಯೆ: 0824-2456544 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!