ಮಂಗಳೂರು: ಜ.31 ರಂದು ಉದ್ಯೋಗಮೇಳ

 ಮಂಗಳೂರು: ಜ.31 ರಂದು ಉದ್ಯೋಗಮೇಳ
Share this post

ಮಂಗಳೂರು, ಜ.24, 2023: ಜ.31 (ಮಂಗಳವಾರ) ಬೆಳಿಗ್ಗೆ 10 ಗಂಟೆಯಿಂದ ನಗರದ ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಗರದ ಕೆನರಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ (ಎನ್.ಸಿ.ಎಸ್.ಪಿ) ಮಾದರಿ ವೃತ್ತಿ ಕೇಂದ್ರ (ಎಂ.ಸಿ.ಸಿ) ದಡಿಯಲ್ಲಿ ನಡೆಯಲಿದೆ.

ಈ ಮೇಳದಲ್ಲಿ 30ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ಭಾಗವಹಿಸಲಿವೆ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ತಾಂತ್ರಿಕ, ಪದವಿ, ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು http://bit.ly/3MW85Be ಲಿಂಕ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಬೇಕು ಹಾಗೂ ಕನಿಷ್ಠ 10 ಸ್ವವಿವರಗಳ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ದೂ.ಸಂಖ್ಯೆ: 0824-2457139 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!