ಜ.25 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಮೇಳ
ಮಂಗಳೂರು, ಜ.24, 2025: ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗಳಲ್ಲಿ ಜ.25 ರಂದು ಲಸಿಕಾ ಮೇಳ ನಡೆಯಲಿದೆ.
ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮುನ್ನೇಚ್ಚರಿಕಾ ಲಸಿಕೆ (Covaxin & Covishield Precautionary Dose) ಲಭ್ಯವಿರುತ್ತದೆ. ಲಸಿಕೆ ಬಾಕಿಯಿರುವ ಸಾರ್ವಜನಿಕರು ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.