ಮೇ. 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

 ಮೇ. 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ
Share this post
ಸಂಗ್ರಹ ಚಿತ್ರ

ಧರ್ಮಸ್ಥಳ, ಜ 29, 2023: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3, 2023 ರಂದು ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದೆ,

ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ: ೦೮೨೫೬-೨೬೬೬೪೪ (08256-266644), ವಾಟ್ಸಪ್: ೯೬೬೩೪೬೪೬೪೮ (9663464648).

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!