ಫೆ.10 ರಂದು ಕಾರ್ಯಾಗಾರ
ಮಂಗಳೂರು,ಫೆ.4, 2023: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಲಹಾ ಸಮಿತಿಯ (ಪಿ.ಸಿ. ಅಂಡ್ ಪಿ.ಎನ್.ಡಿ.ಟಿ ಕಾಯ್ದೆ ಅನುಷ್ಠಾನ) ಸಂಯುಕ್ತಾಶ್ರಯದಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಕಾರ್ಯಗಾರವನ್ನು ಫೆ.10ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಎ.ಜೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ. ವತ್ಸಲ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಬಿ.ವಿ. ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರಾದ ಡಾ. ಸದಾಶಿವ ಶಾನುಭೋಗ್, ನಗರದ ಯೆನೆಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಐಆರ್ಐಎ ಅಧ್ಯಕ್ಷರಾದ ಡಾ. ರವಿಚಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಪ್ರೊ. ಡಾ. ಕೃಷ್ಣ ಕಿರಣ್ ಕಾರಂತ್ ಮತ್ತು ಸರ್ಕಾರಿ ಲೇಡಿಘೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಭಾಗವಹಿಸುವರು.