ಫೆ. 26 ರಂದು ಸ್ಮಾರ್ಟ್‌ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

 ಫೆ. 26 ರಂದು ಸ್ಮಾರ್ಟ್‌ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
Share this post

ಮಂಗಳೂರು,ಫೆ. 24, 2023: ಸ್ಮಾರ್ಟ್‌ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಫೆ. 24 ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್‌ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ.

ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದ ನೂತನ ಪೆವಿಲಿಯನ್ ಉದ್ಘಾಟನೆ ಹಾಗೂ 10 ಗಂಟೆಗೆ ನಗರದ ಹೊಗೈ ಬಜಾರ್‍ನಲ್ಲಿರುವ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಂದು ಸಂಜೆ 5 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲಾಭಿಮುಖ ಪ್ರದೇಶ ಅಭಿವೃದ್ಧಿ ಶಂಕು ಸ್ಥಾಪನೆ, ಸಂಜೆ 5.30ಕ್ಕೆ ಕೇಂದ್ರ ಮಾರುಕಟ್ಟೆ ಶಂಕು ಸ್ಥಾಪನೆ ಹಾಗೂ ಸಂಜೆ 6ಗಂಟೆಗೆ ಸುಲ್ತಾನ ಬತ್ತೇರಿ ಪ್ರದೇಶ ಅಭಿವೃದ್ಧಿ ಯೋಜನೆಯ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!