ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ
ಉಡುಪಿ, ಫೆ 25, 2023: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ ಶಿವಣ್ಣ ಕೋಟೆ ಅವರು ಫೆಬ್ರವರಿ 27 ಮತ್ತು 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ. 27 ರಂದು ಮಧ್ಯಾಹ್ನ 3.30 ಕ್ಕೆ ಉಡುಪಿಯಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ ಪೌರಕಾರ್ಮಿಕರು ಮತ್ತು ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜೆರ್ಸ್ ಹಾಗೂ ಮುಖಂಡರುಗಳ ಜೊತೆ ಕುಂದುಕೊರತೆಗಳ ಕುರಿತು ನೇರ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
ಫೆ. 28 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಂ.ಎಸ್ ಕಾಯ್ದೆ ಮತ್ತು ನಿಯಮಗಳ ಕುರಿತು ತರಬೇತಿ ಕಾರ್ಯಕ್ರಮ, 11 ಕ್ಕೆ ಜಿಲ್ಲಾಡಳಿತದೊಂದಿಗೆ ಸಪಾಯಿ ಕರ್ಮಚಾರಿ / ಪೌರಕಾರ್ಮಿಕರ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.