ಉಡುಪಿ: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

 ಉಡುಪಿ: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ
Share this post

ಉಡುಪಿ, ಮಾರ್ಚ್ 02, 2023: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಮಾರ್ಚ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 8 ಗಂಟೆಗೆ ಚಾರ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ, 8.30 ಕ್ಕೆ ಹೆಬ್ರಿಯ ಹಂದಿಕಲ್ಲು-ಚಾರ ಇಲ್ಲಿ ಶ್ರೀ ಮಲ್ಲಿಕಾರ್ಜುನ ಕೂಡುಕಟ್ಟು ಸಮಿತಿ ಇದರ ಹೋಳಿಹಬ್ಬ ಕಾರ್ಯಕ್ರಮ.

10 ಗಂಟೆಗೆ ನಿಟ್ಟೆ ಮದನಾಡು ಇಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಜವಳಿ ಪಾರ್ಕ್ ಭೂಮಿ ಪೂಜೆ, ಮಧ್ಯಾಹ್ನ 3 ಕ್ಕೆ ಮುದ್ರಾಡಿಯ ಸಮುದಾಯ ಭವನದಲ್ಲಿ ಹೆಬ್ರಿ ತಾಲೂಕು ವ್ಯಾಪ್ತಿಯ 94 ಸಿ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ, ಸಂಜೆ 4 ಕ್ಕೆ ಕಬ್ಬಿನಾಲೆಯಲ್ಲಿ ಮುದ್ರಾಡಿ ಗ್ರಾಮ ಸಮಾವೇಶ, ಸಂಜೆ 6 ಕ್ಕೆ ರೆಂಜಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!