ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ: ನೋಂದಣಿ ಕಾರ್ಯಾಲಯ ಉದ್ಘಾಟನೆ

 ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ: ನೋಂದಣಿ ಕಾರ್ಯಾಲಯ ಉದ್ಘಾಟನೆ
Share this post

ಧರ್ಮಸ್ಥಳ, ಮಾರ್ಚ್ 05, 2023: ಧರ್ಮಸ್ಥಳದಲ್ಲಿ 2023ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.

ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ವಿವಾಹ ನೋಂದಣಿ ಕಾರ್ಯಾಲಯವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಶ್ರೀ ಎ.ವಿ. ಶೆಟ್ಟಿ ಶನಿವಾರ ಉದ್ಘಾಟಿಸಿ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ಶ್ರೀನಿವಾಸ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಧರ್ಣಪ್ಪ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಾಮೂಹಿಕ ವಿವಾಹ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ 08256-266644, 9663464648 / 8147263422 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!