ಹೋಳಿ ಮೆರವಣಿಗೆ : ಮದ್ಯ ಮಾರಾಟ ನಿಷೇಧ
ಉಡುಪಿ, ಮಾರ್ಚ್ 06, 2023: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಂಕಣ ಖಾರ್ವಿ ಸಮಾಜದವರು ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಮೆರವಣಿಗೆ ನಡೆಯಲಿದೆ.
ಈ ಸಂದರ್ಭದಲ್ಲಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳಲ್ಲಿ ಮದ್ಯ ಮಾರಾಟವನ್ನು ಮಾರ್ಚ್ 8 ರ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.