ಉಡುಪಿ: ಮಾ. 9 ರಂದು ಮಿನಿ ಉದ್ಯೋಗ ಮೇಳ

 ಉಡುಪಿ: ಮಾ. 9 ರಂದು ಮಿನಿ ಉದ್ಯೋಗ ಮೇಳ
Share this post

ಉಡುಪಿ, ಮಾರ್ಚ್ 06, 2023: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ,  ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ, ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ  ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!