ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿ ಪರೀಕ್ಷೆ: ಅರ್ಜಿ ಆಹ್ವಾನ

 ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿ ಪರೀಕ್ಷೆ: ಅರ್ಜಿ ಆಹ್ವಾನ
Share this post

ಉಡುಪಿ, ಮಾ 17, 2023: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯು ಸೇನೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ವೆಬ್‌ಸೈಟ್ http://agnipathvayu.cdac.in ಮೂಲಕ ಮಾರ್ಚ್ 31 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು 2002 ರ ಡಿಸೆಂಬರ್ 26 ರಿಂದ 2006 ರ ಜೂನ್ 26 ನಡುವೆ ಜನಿಸಿರುವ,  ಪಿ.ಯು.ಸಿಯಲ್ಲಿ ಕಲೆ, ವಾಣಿಜ್ಯ, ವಿಜ್ಞಾನ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ 50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ. 50% ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅವಿವಾಹಿತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://careerindianairforce.cdac.in ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!