ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು,ಮಾ.22, 2023: ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್‍ನಲ್ಲಿ 2022-23ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ದ್ವಿತೀಯ ವರ್ಷದ ಲ್ಯಾಟರಲ್ ಎಂಟ್ರಿ ಡಿಪ್ಲೊಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಪಟ್ಟ ವಿಷಯದಲ್ಲಿ ಎರಡು ವರ್ಷಗಳ ತಾಂತ್ರಿಕ ಸೇವಾನುಭವ ಹೊಂದಿರುವ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ನಂತರ ಯಾವುದೇ ಅವಧಿಯಲ್ಲಿ ಎರಡು ವರ್ಷಗಳ ಐ.ಟಿ.ಐ ಕೋರ್ಸ್, ದ್ವಿತೀಯ ಪಿ.ಯು.ಸಿ ವಿಜ್ಞಾನ, ತಾಂತ್ರಿಕ ವಿಷಯಗಳಲ್ಲಿ ಕರ್ನಾಟಕದಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಇದೇ ಮಾ.29ರೊಳಗೆ ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!