ಉಡುಪಿ: ಬ್ಯಾನರ್, ಕಟೌಟ್‌ಗಳ ತೆರವಿಗೆ ಮಾ. 24 ಕೊನೆ ದಿನ

 ಉಡುಪಿ: ಬ್ಯಾನರ್, ಕಟೌಟ್‌ಗಳ ತೆರವಿಗೆ ಮಾ. 24 ಕೊನೆ ದಿನ
Share this post

ಉಡುಪಿ, ಮಾ 23, 2023: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -2023 ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು.

ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!