ಮಾ. 27 ರಂದು ವಿಶ್ವ ರಂಗಭೂಮಿ ದಿನಾಚರಣೆ

 ಮಾ. 27 ರಂದು ವಿಶ್ವ ರಂಗಭೂಮಿ ದಿನಾಚರಣೆ
Share this post

ಉಡುಪಿ, ಮಾ 23, 2023: ಯಕ್ಷ ರಂಗಾಯಣ, ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಮತ್ತು ರಂಗ ಸಂಸ್ಕೃತಿ ಕಾರ್ಕಳ ಇವರ ಸಹಯೋಗದೊಂದಿಗೆ ವಿಶ್ವ ರಂಗ ಭೂಮಿ ದಿನಾಚರಣೆ ಹಾಗೂ ಮಕ್ಕಳ ಮಾಯಾಲೋಕ ನಾಟಕ ಪ್ರದರ್ಶನವು ಮಾರ್ಚ್ 27 ರಂದು ಸಂಜೆ 6.30 ಕ್ಕೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನ ವನರಂಗದಲ್ಲಿ ನಡೆಯಲಿದೆ.

ರಾಜ್ಯ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಯಕ್ಷ ರಂಗಾಯಣ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಸದಸ್ಯ ರಂಗಕರ್ಮಿ ಡಾ.ಬಿ.ವಿ.ರಾಜಾರಾಂ ಬೆಂಗಳೂರು, ರಂಗನಿರ್ದೇಶಕ ಕೆ.ಜಿ.ಕೃಷ್ಣಮೂರ್ತಿ ಹೆಗ್ಗೋಡು ಮತ್ತು ಕಾರ್ಕಳ ರಂಗ ಸಂಸ್ಕೃತಿ ಅಧ್ಯಕ್ಷ ಎಸ್.ನಿತ್ಯಾನಂದ ಪೈ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ ಮಕ್ಕಳ ಮಾಯಾಲೋಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!